ADVERTISEMENT

ನಾಗಾಲ್ಯಾಂಡ್‌ ವಿಧಾನಸಭೆ ಚುನಾವಣೆ: ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 14:44 IST
Last Updated 20 ಫೆಬ್ರುವರಿ 2023, 14:44 IST
   

ಕೊಹಿಮಾ: ನಾಗಾಲ್ಯಾಂಡ್‌ ವಿಧಾನಸಭೆಯ 60 ಸ್ಥಾನಗಳಿಗೆ ಇದೇ 27ಕ್ಕೆ ಮತದಾನ ನಡೆಯಲಿದೆ. ಆದರೆ ಇಲ್ಲಿನ ಅಕುಲುಟೊ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಕುಲುಟೊ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದ್ದ ಕಝೊಟೊ ಕಿಮಿನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರ ಎದುರು ಕಾಂಗ್ರೆಸ್‌ನಿಂದ ಉಮೇದುವಾರಿಕೆ ಸಲ್ಲಿಸಿದ್ದ ಖೇಕಶಿ ಸುಮಿ ನಾಮಪತ್ರ ವಾಪಸ್‌ ಪಡೆದಿದ್ದರಿಂದ ಕಝೊಟೊ ಕಿಮಿನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಡಳಿತಾರೂಢ ಎನ್‌ಡಿಪಿಪಿ ಮತ್ತು ಬಿಜೆಪಿ ಮೈತ್ರಿಕೂಟವು ಕ್ರಮವಾಗಿ 40 ಮತ್ತು 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿವೆ. ಪ್ರಮುಖ ವಿರೋಧ ಪಕ್ಷವಾಗಿದ್ದ ಎನ್‌ಪಿಎಫ್‌ ಸಹ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.

ADVERTISEMENT

ಸ್ಪರ್ಧಾ ಕಣದಲ್ಲಿರುವ 183 ಅಭ್ಯರ್ಥಿಗಳ ಪೈಕಿ ನಾಲ್ವರಷ್ಟೇ ಮಹಿಳೆಯರು. ಎನ್‌ಡಿಪಿಪಿ ಇಬ್ಬರು ಮಹಿಳೆಯರನ್ನು ಕಣಕ್ಕೆ ಇಳಿಸಿದರೆ, ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ ಒಬ್ಬರನ್ನು ಕಣಕ್ಕೆ ಇಳಿಸಿವೆ.

ಮಾರ್ಚ್‌ 3ರಂದು ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.