ADVERTISEMENT

ನಾಗಾಲ್ಯಾಂಡ್‌ನಲ್ಲಿ ಭಾರಿ ಮಳೆ: ಮೂವರು ಸಾವು, ವಿಮಾನ ಹಾರಾಟ ಸ್ಥಗಿತ

ಪಿಟಿಐ
Published 7 ಜುಲೈ 2025, 10:13 IST
Last Updated 7 ಜುಲೈ 2025, 10:13 IST
<div class="paragraphs"><p>ಭಾರಿ ಮಳೆಯಿಂದಾಗಿ ನಾಗಾಲ್ಯಾಂಡ್‌ನ ದೀಮಪುರದಲ್ಲಿ ವಸತಿ ಪ್ರದೇಶಗಳು ಜಲಾವೃತಗೊಂಡಿವೆ </p></div>

ಭಾರಿ ಮಳೆಯಿಂದಾಗಿ ನಾಗಾಲ್ಯಾಂಡ್‌ನ ದೀಮಪುರದಲ್ಲಿ ವಸತಿ ಪ್ರದೇಶಗಳು ಜಲಾವೃತಗೊಂಡಿವೆ

   

–ಪಿಟಿಐ ಚಿತ್ರ

ಭುವನೇಶ್ವರ/ಕೊಹಿಮಾ: ಈಶಾನ್ಯ ರಾಜ್ಯ ನಾಗಾಲ್ಯಾಂಡ್‌ ಮತ್ತು ಪೂರ್ವದ ಒಡಿಶಾದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಲವು ಅವಘಡಗಳು ಸಂಭವಿಸಿವೆ.

ADVERTISEMENT

ಕಳೆದ ಕೆಲ ದಿನಗಳಿಂದ ನಾಗಾಲ್ಯಾಂಡ್‌ನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮೂವರು ಮೃತಪಟ್ಟಿದ್ದು, ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ತೊಡಕಾಗಿದೆ.

ದೀಮಪುರದಲ್ಲಿ ವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ವಿದ್ಯುತ್‌ ತಗುಲಿ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೀಮಪುರ ವಿಮಾನ ನಿಲ್ದಾಣದ ರನ್‌ವೇ ಮತ್ತು ಪಾರ್ಕಿಂಗ್‌ ಸ್ಥಳಗಳಲ್ಲಿ ನೀರು ತುಂಬಿದ್ದು, ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ದೀಮಪುರ, ಕೊಹಿಮಾ ಮತ್ತು ನಿಯುಲ್ಯಾಂಡ್‌ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ. ಸೇತುವೆ ಮುಳುಗಡೆ, ಮನೆ, ಕೃಷಿಗೆ ಭೂಮಿಗೆ ಹಾನಿಯಾಗಿದ್ದು, ಆಹಾರ ಅಭದ್ರತೆಯೂ ಉಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಲಾವೃತ‌ಗೊಂಡಿರುವ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ.

ಒಡಿಶಾ: ಇಬ್ಬರು ಸಾವು

ಒಡಿಶಾದ ನೌಪಡ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕೋಳಿ ಸಾಕಣಿಕೆ ಘಟಕವೊಂದು ಕುಸಿದು ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿದ್ದು ಬಾಲಕಿಯೊಬ್ಬಳು ಗಾಯಗೊಂಡಿದ್ದಾಳೆ. ಒಡಿಶಾದ 16 ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯುವ ಸುರಿಯವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪಶ್ಚಿಮ ಬಂಗಾಳ ಅದರ ಸುತ್ತಮುತ್ತ ಭಾನುವಾರ ಕಡಿಮೆ ಒತ್ತಡದ ಪರಿಸ್ಥಿತಿ ನಿರ್ಮಾಣವಾಗಿದ್ದು ಮುಂದಿನ ಎರಡು ದಿನಗಳಲ್ಲಿ ಇದು ಜಾರ್ಖಂಡ್‌ ಮತ್ತು ಛತ್ತೀಸಗಢದ ಕಡೆಗೆ ಚಲಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.