ADVERTISEMENT

ನಾಗಪುರ | 4 ವರ್ಷದ ಬಾಲಕಿಯ ಅತ್ಯಾಚಾರ; ಕಠುವಾ ಶಿಕ್ಷೆ ಬೆನ್ನಲ್ಲೇ ಮತ್ತೊಂದು ಘಟನೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2019, 9:44 IST
Last Updated 11 ಜೂನ್ 2019, 9:44 IST
   

ನಾಗಪುರ:ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು 25 ವರ್ಷ ವಯಸ್ಸಿನ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ವಾಡಿಯಲ್ಲಿ ನಡೆದಿದೆ.

ಎಂಟು ವರ್ಷದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆಗೈದ ಕಠುವಾಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿ 24 ಗಂಟೆ ಕಳೆಯುವ ಮುನ್ನವೇ ಪುಟ್ಟ ಬಾಲಕಿಯನ್ನು ಅತ್ಯಾಚಾರ ಗೈದಿರುವುದು ವರದಿಯಾಗಿದೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಭೂಷಣ್‌ ದಹಾತ್‌ ಎಂದು ಗುರುತಿಸಲಾಗಿದೆ. ಆತ ಬಾಲಕಿಗೆ ಅಶ್ಲೀಲ ವಿಡಿಯೊಗಳನ್ನು ತೋರಿಸಿ, ಅತ್ಯಾಚಾರ ಎಸಗಿದ್ದಾನೆ ಎಂದು ಇನ್‌ಸ್ಪೆಕ್ಟರ್‌ ಆರ್‌.ಎಲ್‌.ಪಾಠಕ್‌ ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್‌ 376ರ ಅಡಿ ಪ್ರಕರಣ ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.