ADVERTISEMENT

ನಾಗ್ಪುರ | ಅಲ್ಯೂಮಿನಿಯಂ ಕಾರ್ಖಾನೆಯಲ್ಲಿ ಸ್ಫೋಟ: ಐವರು ಕಾರ್ಮಿಕರು ಸಾವು

ಪಿಟಿಐ
Published 12 ಏಪ್ರಿಲ್ 2025, 10:52 IST
Last Updated 12 ಏಪ್ರಿಲ್ 2025, 10:52 IST
<div class="paragraphs"><p>ಸ್ಫೋಟ</p></div>

ಸ್ಫೋಟ

   

(ಐಸ್ಟೋಕ್ ಚಿತ್ರ)

ನಾಗ್ಪುರ (ಮಹಾರಾಷ್ಟ್ರ): ಇಲ್ಲಿನ ಅಲ್ಯೂಮಿನಿಯಂ ಉತ್ಪನ್ನಗಳ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಜಿಲ್ಲೆಯ ಉಮ್ರೆಡ್ ಎಂಐಡಿಸಿಯಲ್ಲಿರುವ ಎಂಎಂಪಿ ಅಲ್ಯೂಮಿನಿಯಂ ಇಂಡಸ್ಟ್ರೀಸ್‌ನಲ್ಲಿ ಶುಕ್ರವಾರ ಸಂಜೆ 7 ಗಂಟೆಗೆ ಅವಘಡ ಸಂಭವಿಸಿದೆ.

ಸ್ಥಳದಲ್ಲಿಯೇ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಕಾರ್ಮಿಕರನ್ನು ನಾಗ್ಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮುಂಜಾನೆ ಅವರು ಮೃತಪಟ್ಟಿದ್ದಾರೆ. ಮೃತ ಕಾರ್ಮಿಕರೆಲ್ಲರೂ 20 ರಿಂದ 25 ವರ್ಷದವರಾಗಿದ್ದು, ನಾಗ್ಪುರ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಇನ್ನೂ 5 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.