
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 17 ಜನರು ಮೃತಪಟ್ಟಿದ್ದಾರೆ. 18ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇಂದು (ಭಾನುವಾರ) ಬೆಳಿಗ್ಗೆ ಸ್ಫೋಟ ಸಂಭವಿಸಿದೆ. ಕಟೋಲ್ ತಹಸಿಲ್‌ನ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಿಕಾ ಕಾರ್ಖಾನೆ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ.
ಸ್ಫೋಟದಲ್ಲಿ ಗಾಯಗೊಂಡವರನ್ನು ನಾಗ್ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ 21 ಜನರು ಸಾವಿಗೀಡಾಗಿದ್ದರು. ಇದಾದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.