ADVERTISEMENT

ನಾಗ್ಪುರ, ಜೈಪುರ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ–ಮೇಲ್‌

ಪಿಟಿಐ
Published 18 ಜೂನ್ 2024, 15:15 IST
Last Updated 18 ಜೂನ್ 2024, 15:15 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಹಾಗೂ ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣದಕ್ಕೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದ್ದು, ತಪಾಸಣೆ ನಡೆಸಲಾಗಿದೆ. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆದರಿಕೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ (AAI) ಇಮೇಲ್ ಬಂದಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ವಿಷಯವನ್ನು ನಾಗ್ಪುರ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ತಿಳಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ವಿಮಾನ ನಿಲ್ದಾಣಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಾಯಿತು. ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಮುಂದಿನ 24 ಗಂಟೆಗಳ ಕಾಲ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜೈಪುರ ವಿಮಾನ ನಿಲ್ದಾಣದಲ್ಲಿಯೂ ಪೊಲೀಸರು ಹಾಗೂ ಸಿಐಎಸ್‌ಎಫ್ ಜಂಟಿ ಶೋಧ ಕಾರ್ಯ ನಡೆಸಿವೆ. ಇಲ್ಲಿ ಕೂಡ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.