ಮಮತಾ ಬ್ಯಾನರ್ಜಿ
(ಪಿಟಿಐ ಚಿತ್ರ)
ಮುಂಬೈ: ಹಿಂಸಾಚಾರ ಪೀಡಿತ ನಾಗ್ಪುರದಲ್ಲಿ ಶಾಂತಿ ಕಾಪಾಡುವಂತೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಒತ್ತಾಯಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಮತಾ, 'ಮಹಾರಾಷ್ಟ್ರದಲ್ಲಿ ಯಾವ ಸಮಾಧಿಯನ್ನು ಹಾನಿಗೊಳಿಸುವುದು ಸರಿಯಿಲ್ಲ. ಇದರಿಂದ ಅಲ್ಲಿ ಪರಸ್ಪರ ಸಹೋದರತ್ವ, ಶಾಂತಿ ಮತ್ತು ಸಾಮರಸ್ಯವನ್ನು ಹಾಳು ಮಾಡುತ್ತಿದೆ' ಎಂದು ಹೇಳಿದ್ದಾರೆ.
ಹಿಂಸಾಚಾರ ಪೀಡಿತ ನಾಗ್ಪುರದಲ್ಲಿ ಶಾಂತಿ ಮರುಸ್ಥಾಪಿಸುವಂತೆ ಅಲ್ಲಿನ ಸರ್ಕಾರ ಕಠಿಣ ಕಾನೂನುಗಳನ್ನು ಜಾರಿಗೊಳಿಸುವಂತೆ ಮಮತಾ ಆಗ್ರಹಿಸಿದ್ದಾರೆ.
'ಫಡಣವೀಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಪ್ರಿಯಾಂಕಾ ಚತುರ್ವೇದಿ, ರಾಜ್ಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸುವುದು, ಅಸ್ಥಿರತೆಯನ್ನು ಸೃಷ್ಟಿಸುವ ಮೂಲಕ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ರೈತರ ಆತ್ಮಹತ್ಯೆಗಳ ಸಮಸ್ಯೆ ಕುರಿತ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಬಹುದು' ಎಂದುಕೊಂಡಿದೆ ಎಂದು ತಿಳಿಸಿದ್ದಾರೆ.
ಮೊಘಲ್ ದೊರೆ ಔರಂಗಜೇಬ ಸಮಾಧಿ ತೆರವುಗೊಳಿಸುವಂತೆ ಆಗ್ರಹಿಸಿ ಬಜರಂಗದಳದ ಸದಸ್ಯರು ಸೋಮವಾರ ನಡೆಸಿದ ಪ್ರತಿಭಟನೆ ವೇಳೆ, ಮುಸ್ಲಿಂ ಸಮುದಾಯದ ಪವಿತ್ರ ಗ್ರಂಥ ಕುರಾನ್ ಅನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿ ಹಬ್ಬಿದ ಪರಿಣಾಮ ನಾಗ್ಪುರದ ಕೇಂದ್ರ ಭಾಗದಲ್ಲಿ ಹಿಂಸಾಚಾರ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.