ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನಾಯನಾರ್ ನಾಗೇಂದ್ರನ್ ಅವರು ಶನಿವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಐಎಡಿಎಂಕೆ ಜೊತೆ ಬಿಜೆಪಿ ಮರು ಮೈತ್ರಿ ಘೋಷಣೆಯಾದ ಬೆನ್ನಲ್ಲೇ ಬಿಜೆಪಿ ನೂತನ ಅಧ್ಯಕ್ಷರ ಆಯ್ಕೆಯೂ ನಡೆದಿದೆ.
ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವರಾದ ಜಿ.ಕಿಶನ್ ರೆಡ್ಡಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ರಾಜ್ಯ ಘಟಕದ ಸಭೆ ನಡೆಸಿ ನಾಗೇಂದ್ರನ್ ಅವರ ಸರ್ವಾನುಮತದ ಆಯ್ಕೆಯನ್ನು ಪ್ರಕಟಿಸಿದರು.
ನಿರ್ಗಮಿತ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಇದೇ ವೇಳೆ ಮಾತನಾಡಿ ‘2026ರ ವಿಧಾನಸಭೆ ಚುನಾವಣೆಯಲ್ಲಿ ‘ದುಷ್ಟ ಶಕ್ತಿಯಂತಿರುವ ಡಿಎಂಕೆಯನ್ನು ಅಧಿಕಾರದಿಂದ ಹೊರದಬ್ಬುವುದೇ ನಮ್ಮ ಪ್ರಮುಖ ಗುರಿ. ನೂತನ ಅಧ್ಯಕ್ಷರ ನೇತೃತ್ವದಲ್ಲಿ ಈ ಕಾರ್ಯ ಸಾಧಿಸುತ್ತೇವೆ. ಎಐಎಡಿಎಂಕೆ ಜೊತೆ ಈಗಾಗಲೇ ಮೈತ್ರಿಯಾಗಿದೆ’ ಎಂದು ಹೇಳಿದರು.
ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಐಎಡಿಎಂಕೆ ಜೊತೆಗಿನ ಮೈತ್ರಿ ಘೋಷಣೆ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.