ನೈನಾರ್ ನಾಗೇಂದ್ರನ್
(X/@NainarBJP)
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ತಿರುನಲ್ವೇಲಿ ಕ್ಷೇತ್ರದ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ಪ್ರಸ್ತುತ ರಾಜ್ಯ ಘಟಕದ ಉಪಾಧ್ಯಕ್ಷರಾಗಿರುವ ನಾಗೇಂದ್ರನ್, ಈ ಹಿಂದೆ ಎಐಎಡಿಎಂಕೆಯಲ್ಲಿದ್ದರು. ತ್ಯಾಗರಾಯ ನಗರದಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಕಮಲಾಲಯಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.
ಅವರ ಹೆಸರನ್ನು ಪಕ್ಷದ ಹಾಲಿ ಮುಖ್ಯಸ್ಥ ಕೆ.ಅಣ್ಣಾಮಲೈ, ಕೇಂದ್ರ ಸಚಿವ ಎಲ್. ಮುರುಗನ್, ಕೇಂದ್ರ ಮಾಜಿ ಸಚಿವ ಪೊನ್ ರಾಧಾಕೃಷ್ಣನ್ ಮತ್ತು ಬಿಜೆಪಿ ಶಾಸಕಿ ಮತ್ತು ಮಹಿಳಾ ಮೋರ್ಚಾ ಅಧ್ಯಕ್ಷೆ ವನತಿ ಶ್ರೀನಿವಾಸನ್ ಅವರು ಸೂಚಿಸಿದ್ದಾರೆ ಎಂದು ಪಕ್ಷ ತಿಳಿಸಿದೆ.
ಅಣ್ಣಾಮಲೈ ನಂತರ ನಾಗೇಂದ್ರನ್ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.