ADVERTISEMENT

ಪಶ್ಚಿಮ ಬಂಗಾಳ ಹೆಸರು ಬದಲಾವಣೆ: ಪ್ರಧಾನಿಗೆ ಮಮತಾ ಪತ್ರ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 19:36 IST
Last Updated 3 ಜುಲೈ 2019, 19:36 IST
   

ಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳದ ಹೆಸರನ್ನು 'ಬಾಂಗ್ಲಾ' ಎಂದು ಬದಲಾಯಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಪ್ರಸಕ್ತ ಅಧಿವೇಶನದಲ್ಲಿಯೇ ಸಂವಿಧಾನಿಕ್ಕೆ ತಿದ್ದುಪಡಿ ತರುವ ಮೂಲಕಹೆಸರು ಬದಲಾವಣೆ ಮಾಡಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪಶ್ಚಿಮ ಬಂಗಾಳದ ಹೆಸರನ್ನು ‘ಬಾಂಗ್ಲಾ’ ಎಂದು ಬದಲಾಯಿಸಲು ಕೇಂದ್ರ ಸರ್ಕಾರ ಇನ್ನೂ ಒಪ್ಪಿಗೆ ಸೂಚಿಸಿಲ್ಲ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ರಾಜ್ಯಸಭೆಯಲ್ಲಿ ತಿಳಿಸಿದ ಬೆನ್ನಲ್ಲೇ ಮಮತಾ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

ADVERTISEMENT

ರಾಜ್ಯಗಳ ಹೆಸರು ಬದಲಾಯಿಸಲು ಸಂವಿಧಾನಿಕ್ಕೆ ತಿದ್ದುಪಡಿ ಅಗತ್ಯವಿರುತ್ತದೆ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡ ನಂತರ ಮಾಡಲಾಗುತ್ತದೆ ಎಂದು ರೈ ಹೇಳಿದ್ದಾರೆ.

ರಾಜ್ಯದ ಹೆಸರನ್ನು 'ಬಾಂಗ್ಲಾ' ಎಂದು ಬದಲಾಯಿಸಲು ಸರ್ವಾನುಮತದ ನಿರ್ಣಯವನ್ನು 2018ರ ಜುಲೈ 26ರಂದು ಪಶ್ಚಿಮ ಬಂಗಾಳ ವಿಧಾನಸಭೆ ಅಂಗೀಕರಿಸಿತ್ತು. ಬಳಿಕ ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಸ್ತಾವನೆ ಕಳುಹಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.