ADVERTISEMENT

ನಾರದ ಪ್ರಕರಣ: ಸಿಬಿಐ ಅರ್ಜಿ ವಿಚಾರಣೆ ಮುಂದೂಡಿದ ಕಲ್ಕತ್ತ ಹೈಕೋರ್ಟ್‌

ಪಿಟಿಐ
Published 20 ಮೇ 2021, 10:26 IST
Last Updated 20 ಮೇ 2021, 10:26 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೋಲ್ಕತ್ತ: ನಾರದ ಮಾರುವೇಷದ ಕಾರ್ಯಾಚರಣೆ ಸಂಬಂಧ ಬಂಧಿಸಲಾಗಿರುವ ಟಿಎಂಸಿ ಮುಖಂಡರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ‘ಅನಿವಾರ್ಯ ಕಾರಣಗಳಿಂದಾಗಿ’ ಮುಂದೂಡಲಾಗಿದೆ ಎಂದು ಕಲ್ಕತ್ತ ಹೈಕೋರ್ಟ್‌ ಗುರುವಾರ ಹೇಳಿದೆ.

‘ಅನಿವಾರ್ಯ ಕಾರಣಗಳಿಂದಾಗಿ ಒಂದನೇ ವಿಭಾಗೀಯ ನ್ಯಾಯಪೀಠವು ಗುರುವಾರ ಅರ್ಜಿಯ ವಿಚಾರಣೆ ನಡೆಸುವುದಿಲ್ಲ’ ಎಂಬುದಾಗಿ ಹೈಕೋರ್ಟ್‌ನ ವೆಬ್‌ಸೈಟ್‌ನಲ್ಲಿ ನೋಟಿಸ್‌ ಪ್ರಕಟಿಸಲಾಗಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್‌ ಬಿಂದಲ್‌ ಹಾಗೂ ನ್ಯಾಯಮೂರ್ತಿ ಅರಿಜಿತ್‌ ಬ್ಯಾನರ್ಜಿ ಈ ನ್ಯಾಯಪೀಠದಲ್ಲಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ, ಜೈಲಿನಲ್ಲಿರಿಸಿರುವ ನಾಯಕರ ಬೆಂಬಲಿಗರಿಂದ ಒತ್ತಡ ಇದೆ. ಹೀಗಾಗಿ ತನ್ನ ಅರ್ಜಿಯ ವಿಚಾರಣೆಯನ್ನು ಸಿಬಿಐನ ವಿಶೇಷ ನ್ಯಾಯಾಲಯದಿಂದ ಹೈಕೋರ್ಟ್‌ಗೆ ವರ್ಗಾಯಿಸಬೇಕು’ ಎಂದು ಸಿಬಿಐ ಅರ್ಜಿ ಸಲ್ಲಿಸಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾನೂನು ಸಚಿವ ಮಲಯ್‌ ಘಟಕ್‌ ಅವರನ್ನು ಕೂಡ ಸಿಬಿಐ ಪ್ರತಿವಾದಿಗಳನ್ನಾಗಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.