ಪ್ರಾತಿನಿಧಿಕ ಚಿತ್ರ
ಗುವಾಹಟಿ: ಮಾದಕ ದ್ರವ್ಯಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಆತನಿಂದ ₹20 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸಾಹಿಲ್ ಅಹ್ಮದ್ ಲಸ್ಕರ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಐಜಿಪಿ ಪಾರ್ಥಸಾರಥಿ ಮಹಂತ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಇಂದು ಮುಂಜಾನೆ ಸಿಲ್ಕೋರಿ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ದ್ವಿಚಕ್ರವಾಹನದಲ್ಲಿ ಸಾಗಿಸುತ್ತಿದ್ದ ಯಾಬಾ ಮಾತ್ರೆಗಳು ಮತ್ತು ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯಿಂದ 60,000 ಯಾಬಾ ಮಾತ್ರೆಗಳು, 125 ಗ್ರಾಂ ಹೆರಾಯಿನ್ ಹಾಗೂ ದ್ವಿಚಕ್ರವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಜಿಪಿ ತಿಳಿಸಿದ್ದಾರೆ. ವಶಪಡಿಸಿಕೊಂಡಿರುವ ಮಾದಕ ದ್ರವ್ಯಗಳ ಬೆಲೆ ಸುಮಾರು ₹20 ಕೋಟಿ ಎಂದು ಅಂದಾಜಿಸಲಾಗಿದೆ ಎಂದೂ ಅವರು ಹೇಳಿದ್ದಾರೆ .
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.