ADVERTISEMENT

ನರೇಂದ್ರ ಗಿರಿ ಸಾವು ಪ್ರಕರಣ: ಆನಂದ್ ಗಿರಿ ಜಾಮೀನು ಅರ್ಜಿ ತಿರಸ್ಕೃತ

ಪಿಟಿಐ
Published 1 ಮಾರ್ಚ್ 2023, 11:30 IST
Last Updated 1 ಮಾರ್ಚ್ 2023, 11:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ನರೇಂದ್ರ ಗಿರಿ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆನಂದ್ ಗಿರಿ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನು ಒಳಗೊಂಡ ಪೀಠವು ಅಲಹಾಬಾದ್ ಹೈಕೋರ್ಟ್‌ ಆದೇಶ ಎತ್ತಿ ಹಿಡಿದಿದೆ.

‘ಅರ್ಜಿದಾರರ ಹಿರಿಯ ವಕೀಲರು ಮತ್ತು ಪ್ರತಿವಾದಿಗಳ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರ ವಾದ ಆಲಿಸಿದ್ದೇವೆ ಮತ್ತು ಆದೇಶವನ್ನು ಪರಿಶೀಲಿಸಿದ್ದೇವೆ. ಈ ಹಂತದಲ್ಲಿ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣ ಕಾಣುತ್ತಿಲ್ಲ’ ಎಂದು ಪೀಠ ಹೇಳಿದೆ.

ADVERTISEMENT

ಪರಿಸ್ಥಿತಿಯಲ್ಲಿ ಬದಲಾವಣೆ ಕಂಡು ಬಂದರೆ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಸಮಂಜಸವಾದ ಸಮಯದವರೆಗೆ ಈ ವಿಷಯದಲ್ಲಿ ಯಾವುದೇ ಪ್ರಗತಿ ಇಲ್ಲದಿದ್ದರೆ, ಅರ್ಜಿದಾರರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನಿಗಾಗಿ ತಮ್ಮ ಮನವಿ ಸಲ್ಲಿಸಲು ಮುಕ್ತವಾಗಿದ್ದಾರೆ ಎಂದು ಪೀಠ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.