ADVERTISEMENT

ಸಾಮಾಜಿಕ ಜಾಲತಾಣಗಳಲ್ಲಿ PM ಮೋದಿ ಬಗ್ಗೆ AI ಫೋಟೊ, ವಿಡಿಯೊ ಹಾಕುತ್ತಿದ್ದವನ ಬಂಧನ

ಪಿಟಿಐ
Published 11 ಸೆಪ್ಟೆಂಬರ್ 2025, 5:42 IST
Last Updated 11 ಸೆಪ್ಟೆಂಬರ್ 2025, 5:42 IST
<div class="paragraphs"><p>ಬಂಧನ </p></div>

ಬಂಧನ

   

ರಾಯ್‌ಬರೇಲಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಆಕ್ಷೇಪಾರ್ಹವಾಗಿ ಎಐ ಪೋಸ್ಟ್ ಮಾಡಿದ್ದಕ್ಕೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಉತ್ತರಪ್ರದೇಶದ ರಾಯ್‌ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

ಬಂಧಿತನನ್ನು ಬನ್ನಾವಾ ಜಿಲ್ಲೆಯ ದುರ್ಗೇಶ್ ಕುಮಾರ್ ಎಂದು ಗುರುತಿಸಲಾಗಿದೆ.

ADVERTISEMENT

ದುರ್ಗೇಶ್ ಕುಮಾರ್, ನಿರಂತರವಾಗಿ ಕೃತಕ ಬುದ್ಧಿಮತ್ತೆಯಿಂದ ತಯಾರಿಸಲಾದ ಪ್ರಧಾನಿಗೆ ಸಂಬಂಧಿಸಿದ ವಿಡಿಯೊ, ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ. ಇದನ್ನು ಕಂಡು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಎಸ್‌.ಪಿ ತಿಳಿಸಿದ್ದಾರೆ.

ಬಚ್ಚಾರವನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.