ADVERTISEMENT

Bihar Elections: ಅ.24ರಿಂದ ಪ್ರಧಾನಿ ಮೋದಿ ಪ್ರಚಾರ

ಪಿಟಿಐ
Published 19 ಅಕ್ಟೋಬರ್ 2025, 13:26 IST
Last Updated 19 ಅಕ್ಟೋಬರ್ 2025, 13:26 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಪಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರದಿಂದ ಬಿಹಾರದಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಇಳಿಯಲಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ನಾಲ್ಕು ಚುನಾವಣಾ ರ‍್ಯಾಲಿಗಳನ್ನು ನಿಗದಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್‌ ಜೈಸ್ವಾಲ್‌ ತಿಳಿಸಿದರು.

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್‌ 24ರಂದು ಸಮಷ್ಟಿಪುರದಲ್ಲಿ ನಡೆಯುವ ರ‍್ಯಾಲಿ ಮೂಲಕ ನರೇಂದ್ರ ಮೋದಿ ಅವರು ಪ್ರಚಾರ ಆರಂಭಿಸಲಿದ್ದಾರೆ. ಅದೇ ದಿನ ಬೇಗುಸರಾಯ್‌ನಲ್ಲಿ ಮತ್ತೊಂದು ರ‍್ಯಾಲಿ ನಡೆಯಲಿದೆ ಎಂದರು.

ಜಗತ್ತಿನ ಅತಿದೊಡ್ಡ ನಾಯಕರಲ್ಲಿ ಒಬ್ಬರಾಗಿರುವ ಪ್ರಧಾನಿ ಮೋದಿ ಅವರು ಮೊದಲ ರ‍್ಯಾಲಿ ಆರಂಭಕ್ಕೂ ಮುನ್ನ,  ಭಾರತರತ್ನ ಪುರಸ್ಕೃತ ಕರ್ಪೂರಿ ಠಾಕೂರ್‌ ಅವರ ಜನ್ಮಸ್ಥಳ ಕರ್ಪೂರಿ ಗ್ರಾಮಕ್ಕೆ ಭೇಟಿ ನೀಡಿ, ಅವರಿಗೆ ನಮನ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ADVERTISEMENT

ಅಕ್ಟೋಬರ್‌ 30ರಂದು ಮುಜಫ್ಫರಪುರ, ಛಪ್ರಾ ನಗರದಲ್ಲಿ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ನವೆಂಬರ್‌ 2, 3, 6 ಮತ್ತು 7ರಂದೂ ಮೋದಿ ಅವರ ರ‍್ಯಾಲಿಗಳು ನಿಗದಿಯಾಗಿವೆ ಎಂದು ಮಾಹಿತಿ ನೀಡಿದರು.

ಬಿಹಾರ ವಿಧಾನಸಭೆ ಚುನಾವಣೆಯು ಎರಡು ಹಂತಗಳಲ್ಲಿ ನವೆಂಬರ್‌ 6 ಮತ್ತು 11ರಂದು ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.