ರೇಖಾ ಗುಪ್ತಾ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯ 75ನೇ ಹುಟ್ಟುಹಬ್ಬದ ಅಂಗವಾಗಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಅವರ ಸಂಪುಟ ಸಚಿವರು ದೆಹಲಿಯ ಕರ್ತವ್ಯ ಪಥದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ರಕ್ತದಾನ ಮಾಡಿದ್ದಾರೆ.
ಈ ವೇಳೆ 'ನನ್ನ ಪ್ರತಿ ಹನಿ ರಕ್ತವೂ ದೇಶಕ್ಕಾಗಿ' ಎಂದು ರೇಖಾ ಗುಪ್ತಾ ಹೇಳಿದ್ದಾರೆ.
ಇಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ 1,157 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ. ಇದಕ್ಕೂ ಮೊದಲು, ನಗರಾದ್ಯಂತ ನಡೆದ ರಕ್ತದಾನ ಶಿಬಿರಗಳಲ್ಲಿ ಒಟ್ಟಾರೆಯಾಗಿ 2,000 ಯೂನಿಟ್‌ಗಳು ಸಂಗ್ರಹವಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಗುಪ್ತಾ, ಮೋದಿ ಪರಿಚಯಿಸಿದ ಯೋಜನೆಗಳ ಬಗ್ಗೆ ಶ್ಲಾಘಿಸಿದರು. ದೆಹಲಿಯನ್ನು ಅಭಿವೃದ್ಧಿ ಹೊಂದಿದ ರಾಜಧಾನಿಯಾಗಿ ಮಾಡುವಲ್ಲಿ ಮೋದಿ ಅವರ ಪಾತ್ರವನ್ನು ಒತ್ತಿ ಹೇಳಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ವಿಶೇಷವಾಗಿ ಗುರುತಿಸುವುದರ ಜತೆಗೆ ದೆಹಲಿಯನ್ನು ಪ್ರಸಿದ್ಧಿಗೊಳಿಸಿದ್ದಾರೆ. ದೆಹಲಿಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇದಲ್ಲದೆ, ಕೋವಿಡ್–19 ಸಾಂಕ್ರಾಮಿಕ ಅವಧಿಯಲ್ಲಿ ದೆಹಲಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದಕ್ಕಾಗಿ ಮೋದಿ ಅವರನ್ನು ರೇಖಾ ಶ್ಲಾಘಿಸಿದ್ದಾರೆ.
ದೆಹಲಿಯಲ್ಲಿ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುವ ಗುರಿಯನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ರೇಖಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.