ADVERTISEMENT

PM Modi Birthday: ಪ್ರಧಾನಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಖರ್ಗೆ, ರಾಹುಲ್

ಪಿಟಿಐ
Published 17 ಸೆಪ್ಟೆಂಬರ್ 2025, 6:20 IST
Last Updated 17 ಸೆಪ್ಟೆಂಬರ್ 2025, 6:20 IST
<div class="paragraphs"><p>ನರೇಂದ್ರ ಮೋದಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ</p></div>

ನರೇಂದ್ರ ಮೋದಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ

   

(ಪಿಟಿಐ ಸಂಗ್ರಹ ಚಿತ್ರ)

ನವದೆಹಲಿ: ಇಂದು (ಬುಧವಾರ) 75ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಭಾಶಯಗಳನ್ನು ತಿಳಿಸಿದ್ದಾರೆ.

ADVERTISEMENT

ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, 'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ಸಿಗಲಿ' ಎಂದು ಹಾರೈಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದು, 'ಉತ್ತಮ ಆರೋಗ್ಯ ಸಿಗಲಿ' ಎಂದು ಶುಭ ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ರಾಜಕೀಯ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.