ಶಶಿ ತರೂರ್– ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಶುಭ ಕೋರಿದ್ದು, ದೇಶ ಸೇವೆಯಲ್ಲಿ ನಿಮ್ಮ ಯಶಸ್ಸು ಮುಂದುವರಿಯಲಿ ಎಂದು ಹಾರೈಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಶಶಿ ತರೂರ್, ಉತ್ತಮ ಆರೋಗ್ಯ, ಸಂತೋಷ ಲಭಿಸಲಿ. ರಾಷ್ಟ್ರ ಸೇವೆಯಲ್ಲಿ ನಿಮ್ಮ ಯಶಸ್ಸಿನ ಪಯಣ ಮುಂದುವರಿಯಲ್ಲಿ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮೋದಿ ಅವರ ಜತೆಗಿನ ಸುಂದರ ಚಿತ್ರಗಳನ್ನೂ ಶಶಿ ತರೂರ್ ಹಂಚಿಕೊಂಡಿದ್ದಾರೆ.
ಮೋದಿ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ನಾಯಕರು ಸೇರಿದಂತೆ ಸೆಲೆಬ್ರಿಟಿಗಳು ಸಹ ಶುಭ ಕೋರಿದ್ದಾರೆ.
ಕೇಂದ್ರದ ಆಡಳಿತಾರೂಢ ಬಿಜೆಪಿ ಪಕ್ಷವು ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಹದಿನೈದು ದಿನಗಳ ಕಾಲ ದೇಶದಾದ್ಯಂತ ಸ್ಥಳೀಯ ಉತ್ಪನ್ನಗಳನ್ನು ಉತ್ತೇಜನ, ಆರೋಗ್ಯ ಶಿಬಿರ ಸೇರಿದಂತೆ ಸ್ವಚ್ಛತಾ ಅಭಿಯಾನ ಪ್ರಾರಂಭಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.