ADVERTISEMENT

ಮೋದಿ ಸರ್ಕಾರ ನೆರೆ ರಾಷ್ಟ್ರಗಳೊಂದಿಗಿನ ಸಂಬಂಧ ನಾಶಪಡಿಸಿದೆ: ರಾಹುಲ್ ‌ಗಾಂಧಿ ಆರೋಪ

ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಆರೋಪ

ಪಿಟಿಐ
Published 23 ಸೆಪ್ಟೆಂಬರ್ 2020, 7:58 IST
Last Updated 23 ಸೆಪ್ಟೆಂಬರ್ 2020, 7:58 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ‘ಹಲವು ದಶಕಗಳಿಂದ ಕಾಂಗ್ರೆಸ್‌ ಪಕ್ಷ ಭಾರತದೊಂದಿಗೆ ಬೆಸೆದಿದ್ದ ನೆರೆ– ಹೊರೆಯ ರಾಷ್ಟ್ರಗಳ ಬಾಂಧವ್ಯ ಹಾಗೂ ಸಂಬಂಧಗಳ ಜಾಲವನ್ನು ಪ್ರಧಾನಿ ನರೇಂದ್ರ ಮೋದಿ ನಾಶಪಡಿಸಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್‌ನಲ್ಲಿ ಹರಿಹಾಯ್ದಿರುವ ಅವರು, ‘ಬಾಂಗ್ಲಾದೇಶದೊಂದಿಗಿನ ಭಾರತದ ಸಂಬಂಧ ದುರ್ಬಲಗೊಳ್ಳುತ್ತಿದ್ದು, ಚೀನಾದೊಂದಿಗಿನ ಒಪ್ಪಂದಗಳು ಬಲಗೊಳ್ಳುತ್ತಿವೆ’ ಎಂಬ ‘ದಿ ಎಕನಾಮಿಸ್ಟ್‌‘ ಪತ್ರಿಕೆಯ ಸುದ್ದಿಯ ತುಣಕನ್ನು ಟ್ಯಾಗ್ ಮಾಡಿ, ‘ನೆರೆ–ಹೊರೆಯಲ್ಲಿ ಸ್ನೇಹಿತರಿಲ್ಲದೇ ಜೀವಿಸುವುದು ತುಂಬಾ ಅಪಾಯ’ ಎಂದು ಉಲ್ಲೇಖಿಸಿದ್ದಾರೆ.

‘ನೆರೆಯ ರಾಷ್ಟ್ರಗಳೊಂದಿಗಿನ ಭಾರತದ ಬಾಂಧವ್ಯ ತುಂಬಾ ದುರ್ಬಲವಾಗಿದೆ’ ಎಂದುಮೋದಿ ಸರ್ಕಾರದ ವಿದೇಶಾಂಗ ನೀತಿಯನ್ನು ಕಾಂಗ್ರೆಸ್ ಟೀಕಿಸಿದೆ. ಈ ಆರೋಪವನ್ನು ನಿರಾಕರಿಸಿರುವ ಕೇಂದ್ರ ಸರ್ಕಾರ, ಭಾರತ ಹಲವು ರಾಷ್ಟ್ರಗಳೊಂದಿಗೆ ಒಪ್ಪಂದಗಳ ಜತೆಗೆ ಗಾಢವಾದ ಸಂಬಂಧವನ್ನು ಹೊಂದಿದೆ. ಇದು ಜಾಗತಿಕ ಮಟ್ಟದಲ್ಲಿಭಾರತದ ಸ್ಥಾನ ಬಲಗೊಳ್ಳಲು ಕಾರಣವಾಗಿದೆ ಎಂದು ಪ್ರತಿಕ್ರಿಯಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.