ADVERTISEMENT

ಮೋದಿ ಸರ್ಕಾರದ ಯೋಜಿತ ಹೋರಾಟದಿಂದ ಭಾರತ ಪ್ರಪಾತಕ್ಕೆ: ರಾಹುಲ್‌ ಗಾಂಧಿ ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಸೆಪ್ಟೆಂಬರ್ 2020, 7:25 IST
Last Updated 12 ಸೆಪ್ಟೆಂಬರ್ 2020, 7:25 IST
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ   

ನವದೆಹಲಿ: ಕೋವಿಡ್ ವಿರುದ್ಧ ಮೋದಿ ಸರ್ಕಾರದ 'ಯೋಜಿತ ಹೋರಾಟ'ವು ಭಾರತವನ್ನು ಪ್ರಪಾತಕ್ಕೆ ತಳ್ಳಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿರುವ ಅವರು, 'ಕೋವಿಡ್ ವಿರುದ್ಧ ಮೋದಿ ಸರ್ಕಾರದ ಯೋಜಿತ ಹೋರಾಟವು ಭಾರತವನ್ನು ಪ್ರಪಾತಕ್ಕೆ ತಳ್ಳಿದೆ.
1. ಶೇ.24ರಷ್ಟು ಐತಿಹಾಸಿಕ ಜಿಡಿಪಿ ಕುಸಿತ
2. 12 ಕೋಟಿ ಉದ್ಯೋಗಗಳ ನಷ್ಟ
3. ₹15.5 ಲಕ್ಷ ಕೋಟಿ ಹೆಚ್ಚುವರಿ ಒತ್ತಡದ ಸಾಲ
4. ಜಾಗತಿಕವಾಗಿ ಅತಿ ಹೆಚ್ಚು ದೈನಂದಿನ ಕೋವಿಡ್ ಪ್ರಕರಣಗಳು ಮತ್ತು ಸಾವುಗಳು
ಆದರೆ, ಭಾರತ ಸರ್ಕಾರ ಮತ್ತು ಮಾಧ್ಯಮಗಳಿಗೆ ಮಾತ್ರ ಎಲ್ಲವೂ ಚೆನ್ನಾಗಿದೆ' ಎಂದು ರಾಹುಲ್‌ ವ್ಯಂಗ್ಯವಾಡಿದ್ದಾರೆ.

'ಕೊರೊನಾ ವೈರಸ್ ನಮಗೆ ದೊಡ್ಡ ಸವಾಲಾಗಿದೆ. ಆದರೆ, ಅದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಯೋಜಿತ ಹೋರಾಟ ನಡೆಯುತ್ತಿದೆ ಮತ್ತು ನಮ್ಮ ಪ್ರಯತ್ನಗಳನ್ನು ಇಡೀ ಜಗತ್ತು ಗುರುತಿಸುತ್ತಿದೆ' ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.