ADVERTISEMENT

Bihar Election 2025 | ₹36,000 ಕೋಟಿ ಮೊತ್ತದ ಯೋಜನೆಗಳಿಗೆ ಮೋದಿ ಚಾಲನೆ

ಪಿಟಿಐ
Published 15 ಸೆಪ್ಟೆಂಬರ್ 2025, 11:42 IST
Last Updated 15 ಸೆಪ್ಟೆಂಬರ್ 2025, 11:42 IST
<div class="paragraphs"><p>ಬಿಹಾರದಲ್ಲಿ&nbsp;ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ್ದಾರೆ.</p></div>

ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ್ದಾರೆ.

   

ಪಟ್ನಾ: ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು (ಸೋಮವಾರ) ₹36,000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ್ದಾರೆ.

ಬಿಹಾರದಲ್ಲಿ ಹೊಸದಾಗಿ ಅಭಿವೃದ್ಧಿಪಡಿಸಲಾದ ವಿಮಾನ ನಿಲ್ದಾಣ ಟರ್ಮಿನಲ್ ಸೇರಿದಂತೆ ಈ ವರ್ಷದ ಆರಂಭದಲ್ಲಿ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ರಾಷ್ಟ್ರೀಯ ಮಖಾನಾ ಮಂಡಳಿಯನ್ನು ಮೋದಿ ಉದ್ಘಾಟಿಸಿದ್ದಾರೆ.

ADVERTISEMENT

ದೇಶದ ಮಖಾನಾ ಉತ್ಪಾದನೆಯಲ್ಲಿ ಬಿಹಾರವು ಶೇ 90ರಷ್ಟು ಪಾಲನ್ನು ಹೊಂದಿದೆ.

₹2,680 ಕೋಟಿ ಮೊತ್ತದ ಕೋಸಿ-ಮೆಚಿ ಅಂತರ್ ರಾಜ್ಯ ನದಿ ಸಂಪರ್ಕ ಯೋಜನೆಯ 1ನೇ ಹಂತ ಸೇರಿದಂತೆ ಭಾಗಲ್ಪುರದಲ್ಲಿ 3 x 800 ಮೆಗಾವ್ಯಾಟ್ ವಿದ್ಯುತ್ ಯೋಜನೆಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದು ಬಿಹಾರದಲ್ಲಿ ₹25,000 ಕೋಟಿ ಮೊತ್ತದ ಖಾಸಗಿ ವಲಯದ ಅತಿದೊಡ್ಡ ಹೂಡಿಕೆಯಾಗಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಗೋಕುಲ್ ಮಿಷನ್ ಅಡಿಯಲ್ಲಿ ಅತ್ಯಾಧುನಿಕ ವೀರ್ಯ ಕೇಂದ್ರವನ್ನು ಉದ್ಘಾಟಿಸಿದ್ದಾರೆ. ಇದು ವಾರ್ಷಿಕವಾಗಿ 5 ಲಕ್ಷ ವೀರ್ಯ ಡೋಸ್‌ಗಳನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ ಎಂದು ಅಧಿಕಾರಿ ಹೇಳಿದರು.

ಬಿಹಾರದಲ್ಲಿ ನರೇಂದ್ರ ಮೋದಿ ಅವರು ಹಲವು ರೈಲುಗಳಿಗೆ ಚಾಲನೆ ನೀಡಿದ್ದಾರೆ. ಗಂಗಾ ನದಿಗೆ ಅಡ್ಡಲಾಗಿ ನೇರ ರೈಲು ಸಂಪರ್ಕವನ್ನು ಒದಗಿಸುವ ₹2,170 ಕೋಟಿ ವೆಚ್ಚದ ಬಿಕ್ರಮಶಿಲಾ-ಕಟಾರಿಯಾ ರೈಲು ಮಾರ್ಗಕ್ಕೆ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದೇ ವೇಳೆ ₹4,410 ಕೋಟಿ ಮೊತ್ತದ ಅರಾರಿಯಾ–ಗಲ್ಗಾಲಿಯಾ (ಠಾಕೂರ್ಗಂಜ್) ನಡುವಿನ ಹೊಸ ರೈಲು ಮಾರ್ಗವನ್ನು ಮೋದಿ ಉದ್ಘಾಟಿಸಿದ್ದಾರೆ.

ಇದೇ ವೇಳೆ ಮೋದಿ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 35,000 ಗ್ರಾಮೀಣ ಫಲಾನುಭವಿಗಳು ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ 5,920 ನಗರ ಫಲಾನುಭವಿಗಳಿ‍ಗೆ ಮನೆಗಳನ್ನು ಹಸ್ತಾಂತರಿಸಿದ್ದಾರೆ.

ಬಿಹಾರದಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಕ್ಲಸ್ಟರ್ ಮಟ್ಟದ ಒಕ್ಕೂಟಗಳಿಗೆ ಸುಮಾರು ₹500 ಕೋಟಿ ನಿಧಿಯನ್ನು ಮೋದಿ ವಿತರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.