ಗಯಾಜಿ(ಬಿಹಾರ): ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದಲ್ಲಿ ₹ 6,880 ಕೋಟಿ ಮೌಲ್ಯದ ಯೋಜನೆಗಳಿಗೆ ಶುಕ್ರವಾರ ಚಾಲನೆ ನೀಡಿದ್ದಾರೆ.
ಬಿಹಾರದ ಗಯಾಜಿ ಬಳಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಿದ್ದಾರೆ.
‘ಕಾರ್ಯಕ್ರಮದಲ್ಲಿ ಬಕ್ಸಾರ್ ಉಷ್ಣ ವಿದ್ಯುತ್ ಸ್ಥಾವರ ಯೋಜನೆಗೆ ಚಾಲನೆ ನೀಡಿದ್ದು, 660 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿರುವ ಈ ಯೋಜನೆಯಿಂದ ಬಿಹಾರದ ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗಲಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದೇ ವೇಳೆ ಮುಜಫರ್‌ಪುರ್‌ನಲ್ಲಿನ ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ವಿಭಾಗ, ಮುಂಗೇರ್‌ನಲ್ಲಿ ನಮಾಮಿ ಗಂಗಾ ಯೋಜನೆ ಅಡಿಯಲ್ಲಿ ₹520 ಕೋಟಿ ವೆಚ್ಚದ ಒಳಚರಂಡಿ ಸಂಸ್ಕರಣಾ ಘಟಕ(ಎಸ್‌ಟಿಪಿ), ₹ 1,260 ಕೋಟಿ ಮೊತ್ತದ ನಗರೀಕರಣ ಯೋಜನೆಗಳು ಮತ್ತು ಎರಡು ಅಮೃತ್ ಭಾರತ ವೇಗದ ರೈಲುಗಳಿಗೆ ಚಾಲನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಬಿಹಾರ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ನಿತೀಶ್ ಕುಮಾರ್, ಡಿಸಿಎಂ ಸಮರ್ಥ್ ಚೌದರಿ ಹಾಗೂ ಕೇಂದ್ರ ಸಚಿವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.