ADVERTISEMENT

ಮಣಿಪುರ | ಶನಿವಾರ ಪ್ರಧಾನಿ ಭೇಟಿ ಸಾಧ್ಯತೆ: ಭದ್ರತೆ ಹೆಚ್ಚಳ

ಪಿಟಿಐ
Published 11 ಸೆಪ್ಟೆಂಬರ್ 2025, 13:18 IST
Last Updated 11 ಸೆಪ್ಟೆಂಬರ್ 2025, 13:18 IST
   

ಇಂಫಾಲ್: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದ್ದು, ಇಂಫಾಲ್ ಮತ್ತು ಚುರಾಚಾಂದ್‌ಪುರ ಜಿಲ್ಲಾ ಕೇಂದ್ರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಂಫಾಲ್‌ನ ಕಂಗಲಾ ಕೋಟೆ ಮತ್ತು ಚುರಾಚಾಂದ್‌ಪುರದ ಶಾಂತಿ ಮೈದಾನದಲ್ಲಿ ಭಾರಿ ಸಂಖ್ಯೆಯ ಕೇಂದ್ರ ಮತ್ತು ರಾಜ್ಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲಿ ಪ್ರಧಾನ ಮಂತ್ರಿಯ ಕಾರ್ಯಕ್ರಮಕ್ಕಾಗಿ ಭವ್ಯ ವೇದಿಕೆಯನ್ನು ನಿರ್ಮಿಸಲಾಗುತ್ತಿದೆ. 

ಪ್ರಧಾನಿಯು ಮಿಜೋರಾಂ ಮೂಲಕ ಮಣಿಪುರಕ್ಕೆ ಆಗಮಿಸುವ ಸಾಧ್ಯತೆಯಿದೆ. ಈ ಬಗ್ಗೆ ಕೇಂದ್ರ ಸರ್ಕಾರವಾಗಲಿ, ರಾಜ್ಯದ ಆಡಳಿತವಾಗಲಿ ಯಾವುದೇ ಅಧೀಕೃತ ಹೇಳಿಕೆಯನ್ನು ನೀಡಿಲ್ಲ. ಆದಾಗ್ಯೂ, ಅವರ ಭೇಟಿಗಾಗಿ ರಾಜ್ಯದಲ್ಲಿ ಹಲವು ಪೂರ್ವಸಿದ್ಧತೆಗಳನ್ನು ಮಾಡಲಾಗುತ್ತಿದೆ. 

ADVERTISEMENT

2023ರಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಕೋಮುಗಲಭೆ ಭುಗಿಲೆದ್ದ ನಂತರ, ಪ್ರಧಾನಿ ನೀಡುತ್ತಿರುವ ಮೊದಲ ಭೇಟಿ ಇದಾಗಲಿದೆ. ಹಿಂಸಾಚಾರದಿಂದಾಗಿ ಸುಮಾರು 250 ಜನರು ಮೃತಪಟ್ಟಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.