ADVERTISEMENT

ಕೊರೊನಾ ಸೋಂಕಿನ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ: ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 8:42 IST
Last Updated 7 ಮಾರ್ಚ್ 2020, 8:42 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಕೊರೊನಾ ಸೋಂಕಿನ ಬಗ್ಗೆ ದೇಶದ ಜನರು ಹೆಚ್ಚು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ಭಾರತೀಯ ಜನಔಷಧಿ ಪರಿ ಯೋಜನಾ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಪರೆನ್ಸ್‌ ಮೂಲಕ ಸಂವಾದ ನಡೆಸಿದ ಅವರು, ಇದು ಕೇವಲ ರಾಷ್ಟ್ರೀಯ ಜನಔಷಧಿ ದಿವಸ ಅಲ್ಲ. ಇದು ಲಕ್ಷಾಂತರ ಭಾರತೀಯರನ್ನು ಒಂದುಗೂಡಿಸುವ ವಿಶೇಷ ಸಂದರ್ಭವಾಗಿದೆ. ಲಕ್ಷಾಂತರ ಜನರು ಈ ಯೋಜನೆಯಿಂದ ಅನುಕೂಲ ಪಡೆದಿದ್ದಾರೆ’ಎಂದು ಪ್ರಧಾನಿ ಮೋದಿ ತಿಳಿಸಿದರು.

ಹಸ್ತಲಾಘವ ಕಡಿಮೆಗೊಳಿಸಿ ನಮಸ್ತೆಯ ಮೂಲಕ ಶುಭಕೋರಿ ಎಂದು ಅವರು ಹೇಳಿದರು.

ADVERTISEMENT

ಭಾರತದಲ್ಲಿ ಈವರೆಗೆ ಒಟ್ಟು 31 ಜನರಿಗೆ ಕೊರೊನಾ ಸೋಂಕು ತಗಲಿರುವುದು ದೃಡಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.