ಎಎನ್‌ಐ ಸ್ಕ್ರೀನ್‌ಗ್ರ್ಯಾಬ್
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ರಾಜ್‌ಘಾಟ್‌ಗೆ ಆಗಮಿಸಿದ್ದ ರಾಹುಲ್ ಗಾಂಧಿ ಜೊತೆಗೆ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಪುಷ್ಪ ನಮನ ಸಲ್ಲಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹ ರಾಜ್‌ಘಾಟ್‌ಗೆ ತೆರಳಿ, ಪುಷ್ಪನಮನ ಸಲ್ಲಿಸಿದ್ದಾರೆ.
EnteEnter a X URL
r a X URL
ಇದೇವೇಳೆ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆಯ ರಾಜ್ಯ ಸಚಿವ ಸಂಜಯ್ ಸೇಠ್ ಮತ್ತು ಎಲ್ಲ ಮೂರು ವಾಯುಸೇನೆ, ಭೂಸೇನೆ ಮತ್ತು ನೌಕಾಪಡೆ ಸೇರಿ ಎಲ್ಲ ಸೇನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.