ADVERTISEMENT

ಮೋದಿ ಸರ್ಕಾರ ಯಾವುದೇ ಭರವಸೆ ಈಡೇರಿಸಿಲ್ಲ: ಶರದ್ ಪವಾರ್ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2022, 11:01 IST
Last Updated 29 ಆಗಸ್ಟ್ 2022, 11:01 IST
ಶರದ್‌ ಪವಾರ್‌
ಶರದ್‌ ಪವಾರ್‌   

ಮುಂಬೈ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಸೋಮವಾರ ಟೀಕಿಸಿದ್ದಾರೆ.

ಮಹಾರಾಷ್ಟ್ರದ ಥಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಣ್ಣ ಪಕ್ಷಗಳನ್ನು ಅಧಿಕಾರದಿಂದ ದೂರವಿಡುವುದು ಬಿಜೆಪಿಯ ಅಜೆಂಡಾ ಆಗಿದೆ’ ಎಂದು ಹೇಳಿದ್ದಾರೆ.

2014 ರ ಸಾರ್ವತ್ರಿಕ ಚುನಾವಣೆಯ ನಂತರ ಕೇಂದ್ರ ಸರ್ಕಾರ ಹಲವಾರು ಭರವಸೆಗಳನ್ನು ನೀಡಿತು. ಆದರೆ, ಅದು ಒಂದೇ ಒಂದು ಭರವಸೆಯನ್ನು ಈಡೇರಿಸಲಿಲ್ಲ. ಪ್ರಧಾನಿ ದೇಶದ ಪ್ರತಿಯೊಬ್ಬ ವ್ಯಕ್ತಿಗೆ ಮನೆ ಕೊಡುವ ಭರವಸೆ ನೀಡಿದ್ದರು. ಆದರೆ, ಸರ್ಕಾರ ಅದನ್ನು ಈಡೇರಿಸಲು ವಿಫಲವಾಗಿದೆ ಎಂದು ಪವಾರ್ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ತನಿಖಾ ಸಂಸ್ಥೆಗಳನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಪವಾರ್‌ ಆರೋಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ಮಹಾ ವಿಕಾಸ ಆಘಾಡಿ (ಶಿವಸೇನಾ, ಕಾಂಗ್ರೆಸ್‌ ಮತ್ತು ಎನ್‌ಸಿಪಿ) ಸರ್ಕಾರದ ವಿರುದ್ಧ ಶಿಂದೆ ನೇತೃತ್ವದಲ್ಲಿ ಶಿವಸೇನಾದ ಹಲವು ಶಾಸಕರು ಬಂಡಾಯ ಸಾರಿದ್ದರು. ಬಳಿಕ, ಶಿಂದೆ ಅವರು ಬಿಜೆಪಿ ಬೆಂಬಲದೊಂದಿಗೆ ಜೂನ್‌ 30ರಂದು ಮುಖ್ಯಮಂತ್ರಿಯಾಗಿ, ಫಡಣವೀಸ್‌ ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.