ನವದೆಹಲಿ: ಕೊರೊನಾ ವೈರಸ್ (ಕೋವಿಡ್–19) ಕುರಿತು ಸಂಕೇತ ಭಾಷೆಯಲ್ಲಿ ವಿವರಣೆ ನೀಡಿರುವ ವಿಡಿಯೊದ ಲಿಂಕ್ ಅನ್ನು ಪ್ರಧಾನಿ ನರೇಂದ್ರ ಮೋದಿ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ.
‘ಕೋವಿಡ್–19 ಕುರಿತ ಮೌಲ್ಯಯುತ ಮಾಹಿತಿ’ ಎಂದು ಅವರು ಉಲ್ಲೇಖಿಸಿದ್ದಾರೆ.
ಮಾರಣಾಂತಿಕ ವೈರಸ್‌ನಿಂದ ರಕ್ಷಣೆ ಪಡೆದುಕೊಳ್ಳುವುದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮೋದಿಯವರು ಸಾಮಾಜಿಕ ಮಾಧ್ಯಮಗಳ ಮೂಲಕ ಹಂಚಿಕೊಳ್ಳುತ್ತಿದ್ದಾರೆ.
ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ದೇಶದಲ್ಲಿ ಈವರೆಗೆ 9ಕ್ಕೆ ಏರಿಕೆಯಾಗಿದ್ದು, ಸೋಂಕು ತಗುಲಿದವರ ಸಂಖ್ಯೆ 468 ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.