ADVERTISEMENT

ದೇಶದ ಪ್ರಧಾನಿಯಾಗಿ ಮೋದಿ ಪದಗ್ರಹಣ

ಏಜೆನ್ಸೀಸ್
Published 30 ಮೇ 2019, 14:58 IST
Last Updated 30 ಮೇ 2019, 14:58 IST
   

ನವದೆಹಲಿ: ನರೇಂದ್ರ ಮೋದಿ ಅವರು ದೇಶದ 15ನೇ ಪ್ರಧಾನಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ಲೋಕಸಭೆ ಚುನಾವಣೆಯಲ್ಲಿ 303 ಸೀಟುಗಳನ್ನು ಗೆದ್ದಿರುವ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿಯು, ಮಿತ್ರ ಪಕ್ಷಗಳ ಜತೆಗೇ ಸರ್ಕಾರ ರಚನೆ ಮಾಡಿದೆ. ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾಗಿದ್ದಾರೆ.

ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್‌ ಪ್ರಮಾಣ ವಚನ ವಿಧಿ ಬೋಧನೆ ಮಾಡಿದರು. ಮೋದಿ ಅವರು ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಮೋದಿ ಅವರ ಪದಗ್ರಹಣದ ನಂತರ ರಾಜನಾಥ್‌ ಸಿಂಗ್‌, ಅಮಿತ್‌ ಶಾ, ನಿತಿನ್‌ ಖಡ್ಕರಿ ಅವರು ಪ್ರಮಾಣ ವಚನ ಪಡೆದರು.

ADVERTISEMENT

ಇದಾದ ನಂತರ ರಾಜ್ಯದ ಸಂಸದ ಸದಾನಂದ ಗೌಡ ಮತ್ತು ನಿರ್ಮಲಾ ಸೀತಾರಾಮನ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಸದಾನಂದ ಗೌಡಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.