ADVERTISEMENT

ಇದೇ 26ರಂದು ಶ್ರೀಲಂಕಾ ಪ್ರಧಾನಿ ಜೊತೆ ಮೋದಿ ದ್ವಿಪಕ್ಷೀಯ ಸಭೆ

ಪಿಟಿಐ
Published 23 ಸೆಪ್ಟೆಂಬರ್ 2020, 7:53 IST
Last Updated 23 ಸೆಪ್ಟೆಂಬರ್ 2020, 7:53 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ಇದೇ 26 ರಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ.

ಈ ವೇಳೆ ಉಭಯ ನಾಯಕರು ರಾಷ್ಟ್ರಗಳ ನಡುವಿನ ಸಂಬಂಧ ವೃದ್ಧಿ ಬಗ್ಗೆ ಮಾತುಕತೆ ನಡೆಸಲಿದ್ದು, ಭಯೋತ್ಪಾದನೆ ಶಮನ,ರಕ್ಷಣಾ ವ್ಯವಸ್ಥೆ, ವ್ಯಾಪಾರ ವೃದ್ಧಿ ಹಾಗೂ ಶ್ರೀಲಂಕಾದಲ್ಲಿ ಭಾರತೀಯ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಇದೇ ಸಂದರ್ಭದಲ್ಲಿ ಶ್ರೀಲಂಕಾದತಮಿಳು ಸಮುದಾಯದ ಆಕಾಂಕ್ಷೆಗಳನ್ನು ಈಡೇರಿಸುವ ಬಗ್ಗೆಯೂ ಭಾರತ ಮಾತುಕತೆ ನಡೆಸಲಿದೆ ಎಂದು ಸಚಿವಾಲಯ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.