ADVERTISEMENT

ಪ್ರಧಾನಿಯಾಗಿ ಮೋದಿ ಹಿಂದೂ ವಿರೋಧಿಯಾಗಿದ್ದಾರೆ: ಸುಬ್ರಮಣಿಯನ್‌ ಸ್ವಾಮಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಮೇ 2022, 5:15 IST
Last Updated 17 ಮೇ 2022, 5:15 IST
ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ
ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಿಗೆ ಒತ್ತು ನೀಡಿಲ್ಲ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ, ಮೋದಿ ಅವರನ್ನು 'ಹಿಂದೂ ವಿರೋಧಿ' ಎಂದಿದ್ದಾರೆ.

'ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಬಿಜೆಪಿ ಪ್ರಣಾಳಿಕೆ ಭರವಸೆಗಳನ್ನು ಎತ್ತಿಹಿಡಿಯದೆ ಹಿಂದೂ ವಿರೋಧಿಯಾಗಿದ್ದಾರೆ' ಎಂದಿರುವ ಸುಬ್ರಮಣಿಯನ್‌ ಸ್ವಾಮಿ ಕೆಲವು ಪೂರಕ ಉದಾಹರಣೆಗಳನ್ನು ನೀಡಿದ್ದಾರೆ.

'ರಾಮ ಮಂದಿರ ಕುರಿತಾದ ಸುಪ್ರೀಂ ಕೋರ್ಟ್‌ ನಿರ್ಣಯವನ್ನು ವಿಳಂಬಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಐತಿಹಾಸಿಕ ರಾಮ ಸೇತುವಿಗೆ ಪ್ರಾಚೀನ ಪರಂಪರೆಯ ಸ್ಥಾನಮಾನ ನೀಡುವುದಕ್ಕೆ ವಿಳಂಬವಾಗುತ್ತಿದೆ, ಉತ್ತರಾಖಂಡದ ಹಳೆಯ ದೇವಸ್ಥಾನಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗಿದೆ, 1991ರ ಪೂಜಾ ಸ್ಥಳಗಳ ಕಾಯಿದೆಯನ್ನು ಹಿಂತೆಗೆದುಕೊಳ್ಳಲು ನಿರಾಕರಿಸಲಾಗುತ್ತಿದೆ' ಎಂದು ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.