ADVERTISEMENT

ಭಾರತದಲ್ಲಿ ಹೂಡಿಕೆಗೆ ಅಮೆರಿಕದ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

ಏಜೆನ್ಸೀಸ್
Published 22 ಜುಲೈ 2020, 18:08 IST
Last Updated 22 ಜುಲೈ 2020, 18:08 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ‘ಭಾರತದಲ್ಲಿ ಹೂಡಿಕೆಗೆ ಅವಕಾಶವಿದ್ದು, ಹೂಡಿಕೆ ಮಾಡಲು ಇದು ಸರಿಯಾದ ಕಾಲ. ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಕಂಪನಿಗಳಿಗೆ ಆಹ್ವಾನ ನೀಡಿದ್ದಾರೆ.

ಭಾರತ–ಅಮೆರಿಕ ಬ್ಯುಸಿನೆಸ್ ಕೌನ್ಸಿಲ್ ಆಯೋಜಿಸಿರುವ ಎರಡು ದಿನಗಳ ವರ್ಚ್ಯುವಲ್ ಶೃಂಗಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ಭಾರತದಲ್ಲಿ ಬಾಹ್ಯಾಕಾಶ ಸಂಶೋಧನೆ, ವಿಮಾನಯಾನ, ವಿಮಾನ ತಯಾರಿಕೆ ಮತ್ತು ವೈದ್ಯಕೀಯ ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿ’ ಎಂದು ಮೋದಿ ಆಹ್ವಾನಿಸಿದರು.

‘ರಕ್ಷಣಾ ಕ್ಷೇತ್ರದಲ್ಲಿ ಶೇ 75ರವರೆಗೂ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ನೀಡಲಾಗಿದೆ. ವಿಮಾ ಕ್ಷೇತ್ರದಲ್ಲೂ ಹೂಡಿಕೆ ನಿಯಮಗಳನ್ನು ಸಡಿಲಿಸಲಾಗಿದೆ. ಭಾರತವು ವಿದೇಶಿ ಬಂಡವಾಳವನ್ನು ಮುಕ್ತವಾಗಿ ಸ್ವಾಗತಿಸುತ್ತದೆ’ ಎಂದು ಮೋದಿ
ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.