ಮಹಾರಾಷ್ಟ್ರ ವಿಧಾನಸಭಾ
(ಪಿಟಿಐ ಚಿತ್ರ)
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು ಭಾನುವಾರ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ, ಅಜಿತ್ ಪವಾರ್, ಬಿಜೆಪಿ ಹಿರಿಯ ಮುಖಂಡರಾದ ಚಂದ್ರಕಾಂತ್ ಪಾಟೀಲ್, ಚಂದ್ರಶೇಖರ್ ಅವರಿದ್ದರು
ಕಳೆದ ವಿಧಾನಸಭೆಗೂ ನಾರ್ವೇಕರ್ ಅವರೇ ಸ್ಪೀಕರ್ ಆಗಿದ್ದರು. ಇವರು ಕೋಲಾಬಾ ವಿಧಾನಸಭಾ ಕ್ಷೇತ್ರದ ಶಾಸಕರು.
ಸ್ಪೀಕರ್ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸದ ಕಾರಣ ನಾರ್ವೇಕರ್ ಆಯ್ಕೆಯಾಗಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.