ಇಸ್ರೊ
ರಾಯಿಟರ್ಸ್ ಚಿತ್ರ
ಬೆಂಗಳೂರು: ನಾಸಾ ಮತ್ತು ಇಸ್ರೊ ಜಂಟಿಯಾಗಿ ಜುಲೈ 30ರಂದು ನಿಸಾರ್ ಉಪಗ್ರಹವನ್ನು ಉಡಾವಣೆಗೊಳಿಸಲಿವೆ.
ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್‌ಎಲ್‌ವಿ–ಎಫ್16 ಉಡಾವಣಾ ವಾಹನವು ನಿಸಾರ್ ಉಪಗ್ರಹವನ್ನು ಹೊತ್ತೊಯ್ಯಲಿದೆ ಎಂದು ಇಸ್ರೋ ತಿಳಿಸಿದೆ.
ಇಡೀ ಭೂಮಿಯ ಮೇಲೆ ನಿಗಾ ಇಡಲಿರುವ ನಿಸಾರ್ ಉಪಗ್ರಹವು ಪ್ರತಿ 12 ದಿನಗಳಿಗೊಮ್ಮೆ ಹವಾಮಾನ, ಸೂರ್ಯೋದಯ ಮತ್ತು ಸೂರ್ಯಾಸ್ತಗಳ ಬಗ್ಗೆ ಮಾಹಿತಿ ನೀಡಲಿದೆ. ಸಣ್ಣ ಸಣ್ಣ ಬದಲಾವಣೆಗಳನ್ನು ಪತ್ತೆ ಹಚ್ಚಲಿದೆ ಎಂದು ಇಸ್ರೊ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.