ಮುಂಬೈ: ವಿ.ಡಿ. ಸಾವರ್ಕರ್ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಹಾರಾಷ್ಟ್ರದ ನಾಸಿಕ್‌ನ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.
2022ರ ಭಾರತ್ ಜೋಡೊ ಯಾತ್ರೆ ವೇಳೆ ಅವರು ಆರ್‌ಎಸ್‌ಎಸ್ ನಾಯಕ ಸಾವರ್ಕರ್ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು.
ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾದ ರಾಹುಲ್ ಗಾಂಧಿ, ತಾನು ತಪ್ಪೆಸಗಿಲ್ಲ ಎಂದು ಹೇಳಿದರು. ಅವರ ವಿರುದ್ಧ ನಾಸಿಕ್ ನಿವಾಸಿ ದೇವೇಂದ್ರ ಭುತದ ಅವರು ಮಾನಹಾನಿ ಪ್ರಕರಣ ದಾಖಲಿಸಿದ್ದರು.
ರಾಹುಲ್ ಗಾಂಧಿ ಅವರ ಹೇಳಿಕೆಯ ನಂತರ ಅವರ ವಕೀಲರು ಜಾಮೀನಿಗಾಗಿ ಕೋರಿದರು. ₹15 ಸಾವಿರ ಮೊತ್ತದ ಬಾಂಡ್‌ನೊಂದಿಗೆ ನ್ಯಾಯಾಲಯವು ಅರ್ಜಿಯನ್ನು ಪರಿಗಣಿಸಿತು ಎಂದು ವಕೀಲ ಪಿಂಗಳೆ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.