ನವದೆಹಲಿ: ಕೇಂದ್ರ ಹಾಗೂ ರಾಜ್ಯದ ಪೊಲೀಸ್ ಪಡೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 1,090 ಪೊಲೀಸರಿಗೆ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ ಗುರುವಾರ ಸೇವಾ ಪದಕ ಘೋಷಿಸಲಾಗಿದೆ.
‘233 ಮಂದಿಗೆ ಶೌರ್ಯ ಪದಕ, 99 ಮಂದಿಗೆ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ ಹಾಗೂ 758 ಮಂದಿಗೆ ಶ್ಲಾಘನೀಯ ಸೇವಾ ಪದಕ ಘೋಷಿಸಲಾಗಿದೆ’ ಎಂದು ಕೇಂದ್ರ ಗೃಹ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ
ಪದಕಗಳ ಪಟ್ಟಿಯಲ್ಲಿ ಅಗ್ನಿಶಾಮಕ, ಗೃಹ ರಕ್ಷಕದಳ ಹಾಗೂ ನಾಗರಿಕ ರಕ್ಷಣೆ, ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಗಳ ಸಿಬ್ಬಂದಿಯೂ ಒಳಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.