ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ಪರಿಗಣಿಸುವ ಕುರಿತಂತೆ ದೆಹಲಿ ನ್ಯಾಯಾಲಯ ತನ್ನ ನಿರ್ಣಯವನ್ನು ಕಾಯ್ದಿರಿಸಿದೆ.
ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ಜುಲೈ 29ರಂದು ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.
ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್(ಎಜೆಎಲ್) ₹90 ಕೋಟಿ ಸಾಲ ಪಡೆದಿತ್ತು. ಈ ಸಾಲ ತೀರಿಸುವುದಕ್ಕೆ ಪ್ರತಿಯಾಗಿ ವಂಚನೆ ಮಾರ್ಗದ ಮೂಲಕ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಯಂಗ್ ಇಂಡಿಯನ್ ಕಂಪನಿಯಲ್ಲಿ ಶೇ 76ರಷ್ಟು ಷೇರುಗಳನ್ನು ಪಡೆದುಕೊಂಡಿದ್ದಾರೆ ಎಂದು ಇ.ಡಿ ಆರೋಪಿಸಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಲ್ಲ ಆರೋಪಿಗಳ ವಿರುದ್ಧವೂ ಹಣ ಅಕ್ರಮ ವರ್ಗಾವಣೆಯ ಆರೋಪ ಹೊರಿಸಲಾಗಿದೆ. ಖಂಡಿತವಾಗಿಯೂ ಹಣ ಅಕ್ರಮ ವರ್ಗಾವಣೆಯಾಗಿರುವ ಪ್ರಕರಣ ಇದಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ನ್ಯಾಯಾಲಯದಲ್ಲಿ ವಾದಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.