
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ಪರಿಗಣಿಸುವುದಿಲ್ಲ ಎಂದು ದೆಹಲಿಯ ವಿಶೇಷ ನ್ಯಾಯಾಲಯ ತಿಳಿಸಿದೆ.
ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯು) ಅಕ್ಟೋಬರ್ 3ರಂದು ಗಾಂಧಿ ಕುಟುಂಬ ಮತ್ತು ಇತರ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಈ ಕುರಿತು ತೀರ್ಪು ಪ್ರಕಟಿಸಿರುವ ನ್ಯಾಯಾಲಯವು, ‘ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಇತರ ಆರೋಪಿಗಳು ಎಫ್‌ಐಆರ್ ಪ್ರತಿಯನ್ನು ಪಡೆಯಲು ಅರ್ಹರಲ್ಲ’ ಎಂದು ಹೇಳಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ಮುಂದಿನ ತನಿಖೆಯನ್ನು ಮುಂದುವರಿಸಬಹುದು. ಆದಾಗ್ಯೂ, ಇ.ಡಿ ಪ್ರಕರಣವು ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರು ಮತ್ತು ಮ್ಯಾಜಿಸ್ಟ್ರೇಟ್ ಅವರ ಸಮನ್ಸ್ ಆದೇಶಗಳನ್ನು ಆಧರಿಸಿದೆಯೇ ಹೊರತು ಯಾವುದೇ ಎಫ್‌ಐಆರ್ ಅನ್ನು ಆಧರಿಸಿಲ್ಲವಾದ್ದರಿಂದ ಈ ಹಂತದಲ್ಲಿ ವಿಚಾರಣೆಗೆ ಪರಿಗಣಿಸಲಾಗುವುದಿಲ್ಲ’ ಎಂದು ನ್ಯಾಯಾಲಯ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.