ನವದೆಹಲಿ: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ.
ವಿಶೇಷ ನ್ಯಾಯಾದೀಶ ವಿಶಾಲ್ ಗೋಗನೆ ಅವರ ಎದುರು ಇ.ಡಿ ಈ ಕುರಿತ ವರದಿ ಸಲ್ಲಿಸಿದೆ.
ಇದೇ ಸಂದರ್ಭದಲ್ಲಿ ಪ್ರಕರಣದ ದೋಷಾರೋಪ ಪಟ್ಟಿಯ ಪ್ರತಿಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೂ ನೀಡುವಂತೆ ಇ.ಡಿಗೆ ನ್ಯಾಯಾಧೀಶರು ಸೂಚಿಸಿದರು.
ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು 2014ರ ಜೂನ್ 26ರಂದು ದಾಖಲಿಸಿದ ಖಾಸಗಿ ದೂರನ್ನು ಪಟಿಯಾಲಾ ಹೌಸ್ ನ್ಯಾಯಾಲಯದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟರು ಪರಿಗಣನೆಗೆ ತೆಗೆದುಕೊಂಡ ನಂತರ, ಇ.ಡಿ ತನಿಖೆಯು 2021ರಲ್ಲಿ ಶುರುವಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.