ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ದೋಷಾರೋಪ ಪಟ್ಟಿ ಪರಿಗಣಿಸಿ ಹೊರಡಿಸಬೇಕಿದ್ದ ಆದೇಶವನ್ನು ದೆಹಲಿ ನ್ಯಾಯಾಲಯವು ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸ್ಪಷ್ಟೀಕರಣಗಳನ್ನು ಪಡೆಯುವುದಕ್ಕಾಗಿ ಆಗಸ್ಟ್ 7 ಮತ್ತು 8ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಇ.ಡಿ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಆಧರಿಸಿ ಜುಲೈ 2ರಿಂದಲೂ ವಾದ–ಪ್ರತಿವಾದಗಳನ್ನು ನ್ಯಾಯಾಲಯ ಆಲಿಸಿದೆ.
ಜುಲೈ 15ರಂದು ವಾದ–ಪ್ರತಿವಾದಗಳನ್ನು ಹೇಳಿದ್ದು ಮುಕ್ತಾಯಗೊಂಡ ಬಳಿಕ ವಿಶೇಷ ನ್ಯಾಯಾದೀಶ ವಿಶಾಲ್ ಗೋಗನೆ ಅವರು ಜುಲೈ 29ಕ್ಕೆ ಆದೇಶ ನೀಡುವುದಾಗಿ ತಿಳಿಸಿದ್ದರು.
ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆಂದು ಇ.ಡಿ ತನ್ನ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.