ADVERTISEMENT

ಎನ್‌ಎಂಸಿಯಿಂದ ಪಾರದರ್ಶಕತೆ: ಮೋದಿ

ಪಿಟಿಐ
Published 26 ಫೆಬ್ರುವರಿ 2021, 7:49 IST
Last Updated 26 ಫೆಬ್ರುವರಿ 2021, 7:49 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಚೆನ್ನೈ: ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ)ಬಹಳಷ್ಟು ಪಾರದರ್ಶಕತೆಯನ್ನು ತರುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.

ಇಲ್ಲಿನ ತಮಿಳುನಾಡು ಡಾ.ಎಂ.ಜಿ.ಆರ್‌ ವೈದ್ಯಕೀಯ ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವವನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು.

‘ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಪರಿವರ್ತನೆ ತರಲು ಸರ್ಕಾರ ಶ್ರಮಿಸುತ್ತಿದೆ. ಇದರ ಭಾಗವಾಗಿ ಅಸ್ತಿತ್ವಕ್ಕೆ ತರಲಾಗಿರುವ ಆಯೋಗವು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ, ಉತ್ತಮ ಮಾನವ ಸಂಪನ್ಮೂಲ ಲಭ್ಯವಾಗುವಂತೆ ಮಾಡುವುದು’ ಎಂದು ಹೇಳಿದರು.

ADVERTISEMENT

ಕಳೆದ ಆರು ವರ್ಷಗಳ ಅವಧಿಯಲ್ಲಿ 30,000 ಎಂಬಿಬಿಎಸ್‌ ಸೀಟುಗಳನ್ನು ಹೆಚ್ಚಿಸಲಾಗಿದೆ. ಇದು 2014ರಲ್ಲಿದ್ದ ಸೀಟುಗಳ ಸಂಖ್ಯೆಯಲ್ಲಿ ಶೇ 50ರಷ್ಟು ಹೆಚ್ಚಳ ಮಾಡಿದಂತಾಗಿದೆ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.