
ಪಿಟಿಐ
ಲೋಕಸಭೆ
ನವದೆಹಲಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಸಹಾಯವಾಣಿಗೆ ಪ್ರತಿ ನಿಮಿಷಕ್ಕೆ ಸರಾಸರಿ ಎರಡು ಕರೆಗಳು ಬರುತ್ತಿವೆ ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ.
ರಾಜ್ಯಸಭೆಗೆ ಲಿಖಿತ ಪ್ರತಿಕ್ರಿಯೆ ನೀಡಿರುವ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ‘2022ರ ಅಕ್ಟೋಬರ್‌ನಲ್ಲಿ ‘ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ’ ಕಾರ್ಯಕ್ರಮ ಆರಂಭಗೊಂಡ ಬಳಿಕ ಈವರೆಗೆ ಸುಮಾರು ಮೂವತ್ತು ಲಕ್ಷ ಕರೆಗಳು ಬಂದಿವೆ’ ಎಂದು ತಿಳಿಸಿದ್ದಾರೆ.
ಮಾನಸಿಕ ಆರೋಗ್ಯ ಸಮಾಲೋಚನೆ ಮತ್ತು ಆರೈಕೆಯ ಗುಣಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಆರಂಭಗೊಂಡ ಟೆಲಿ ಮಾನಸ್ ಸಹಾಯವಾಣಿ(18008914416) ಸೇವೆಯು 20 ಭಾಷೆಗಳಲ್ಲಿ ಲಭ್ಯವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.