ಅಲೋಕ್ ಜೋಶಿ
ಚಿತ್ರ ಕೃಪೆ: ಎಕ್ಸ್
ನವದೆಹಲಿ: ಕೇಂದ್ರ ಸರ್ಕಾರವು ಭಾರತದ ಬಾಹ್ಯ ಗುಪ್ತಚರ ಸಂಸ್ಥೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (R&AW)ನ ಮಾಜಿ ಮುಖ್ಯಸ್ಥ ಅಲೋಕ್ ಜೋಶಿ ಅವರನ್ನು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ (ಎನ್‌ಎಸ್‌ಎಬಿ) ಅಧ್ಯಕ್ಷರನ್ನಾಗಿ ನೇಮಿಸಿ ಬುಧವಾರ ಆದೇಶ ಹೊರಡಿಸಿದೆ.
ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಗೆ ಭಾರತವು ಪ್ರತೀಕಾರ ತೀರಿಸಿಕೊಳ್ಳಲು ತಯಾರಿ ನಡೆಸುತ್ತಿದೆ ಎನ್ನುವ ಊಹಾಪೋಹಗಳ ನಡುವೆ, ಅದರ ಗಡಿಯಾಚೆಗಿನ ಸಂಪರ್ಕಗಳನ್ನು ಗಮನದಲ್ಲಿಟ್ಟುಕೊಂಡು ಈ ಬದಲಾವಣೆ ಮಾಡಿದೆ.
ನೌಕಾಪಡೆಯ ಪಶ್ಚಿಮ ಕಮಾಂಡ್‌ನ ಮಾಜಿ ಏರ್ ಕಮಾಂಡರ್ ಏರ್ ಮಾರ್ಷಲ್ ಪಿ.ಎಂ. ಸಿನ್ಹಾ, ಮಾಜಿ ಸದರ್ನ್ ಆರ್ಮಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಎ.ಕೆ.ಸಿಂಗ್ ಮತ್ತು ನೌಕಾಪಡೆಯ ನಿವೃತ್ತ ರಿಯರ್ ಅಡ್ಮಿರಲ್ ಮಾಂಟಿ ಖನ್ನಾ ಅವರನ್ನು ನೂತನ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಇವರಲ್ಲದೆ, ಮಾಜಿ ರಾಜತಾಂತ್ರಿಕ ಅಧಿಕಾರಿ ಬಿ. ವೆಂಕಟೇಶ್ ವರ್ಮಾ ಮತ್ತು ನಿವೃತ್ತ ಐಪಿಎಸ್ ರಾಜೀವ್ ರಂಜನ್ ವರ್ಮಾ ಅವರನ್ನೂ ಮಂಡಳಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.