ADVERTISEMENT

ರಾಷ್ಟ್ರೀಯ ತಂತ್ರಜ್ಞಾನ ದಿನ: ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಗೌರವ

ಪೋಖ್ರಾನ್‌ ಅಣ್ವಸ್ತ್ರ ಪರೀಕ್ಷೆ ವರ್ಷಾಚರಣೆ

ಪಿಟಿಐ
Published 11 ಮೇ 2022, 6:21 IST
Last Updated 11 ಮೇ 2022, 6:21 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: 1998ರ ಪೋಖ್ರಾನ್‌ ಅಣ್ವಸ್ತ್ರ ಪರೀಕ್ಷೆ ವರ್ಷಾಚರಣೆ ಅಂಗವಾಗಿ ಹಾಗೂ ರಾಷ್ಟ್ರೀಯ ತಂತ್ರಜ್ಞಾನ ದಿನದ (National Technology Day) ಸಂದರ್ಭದಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ವಿಜ್ಞಾನಿಗಳಿಗೆ ಗೌರವ ಸಲ್ಲಿಸಿದ್ದಾರೆ.

ಪೋಖ್ರಾನ್‌ನಲ್ಲಿ ಯಶಸ್ವಿ ಅಣ್ವಸ್ತ್ರ ಪರೀಕ್ಷೆ ನಡೆಸಿರುವುದನ್ನು ಗುರುತಿಸಿ ರಾಷ್ಟ್ರೀಯ ತಂತ್ರಜ್ಞಾನ ದಿನ ಆಚರಿಸಲಾಗುತ್ತಿದೆ.

‘ಇಂದು, ರಾಷ್ಟ್ರೀಯ ತಂತ್ರಜ್ಞಾನ ದಿನದಂದು ನಾವು 1998ರಲ್ಲಿ ಪೋಖ್ರಾನ್‌ನಲ್ಲಿ ಯಶಸ್ವಿ ಅಣ್ವಸ್ತ್ರ ಪರೀಕ್ಷೆ ನಡೆಸಿದ್ದ ನಮ್ಮ ಖ್ಯಾತ ವಿಜ್ಞಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇವೆ. ಅತ್ಯುತ್ತಮ ರಾಜನೀತಿ ಮತ್ತು ಧೈರ್ಯ ಪ್ರದರ್ಶಿಸಿದ್ದ ಮಾದರಿ ಆಡಳಿತಗಾರ ಅಟಲ್‌ ಜೀ ಅವರನ್ನೂ ಹೆಮ್ಮೆಯಿಂದ ಸ್ಮರಿಸುತ್ತೇವೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಅಣ್ವಸ್ತ್ರ ಪರೀಕ್ಷೆಗೆ ಸಂಬಂಧಿಸಿದ ಕಿರು ವಿಡಿಯೊ ತುಣುಕೊಂದನ್ನೂ ಮೋದಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.