
ಪಿಟಿಐ
ನವದೆಹಲಿ: ‘ಯಾವುದೇ ರೀತಿಯ ಆಕರ್ಷಣೆ, ಪೂರ್ವಗ್ರಹ ಮತ್ತು ತಪ್ಪು ಮಾಹಿತಿಗಳ ಪ್ರಭಾವಕ್ಕೆ ಒಳಗಾಗದೆ, ಬುದ್ಧಿಶಕ್ತಿಯನ್ನು ಬಳಸಿ ಎಲ್ಲ ಭಾರತೀಯರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಾರೆ ಎಂದು ನಾನು ನಂಬಿದ್ದೇನೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
‘16ನೇ ರಾಷ್ಟ್ರೀಯ ಮತದಾರರ ದಿನ’ದ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿ, ‘ದೇಶದ ಚುನಾವಣಾ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ತಮ್ಮ ಮತದಾನದ ಹಕ್ಕನ್ನು ಸೂಕ್ತ ರೀತಿಯಲ್ಲಿ ಚಲಾಯಿಸಬೇಕು. ತಮ್ಮ ಹಕ್ಕು ಚಲಾಯಿಸಲು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಹೊರಬರುತ್ತಿರುವುದು ಸಂತಸದ ವಿಚಾರ’ ಎಂದರು.
ಚುನಾವಣಾ ಆಯೋಗ ಸ್ಥಾಪನೆಯಾದ ದಿನವನ್ನು (1950ರ ಜ. 25) ಕಳೆದ 16 ವರ್ಷಗಳಿಂದ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.