ADVERTISEMENT

ಪಂಜಾಬ್‌ ವಿಧಾನಸಭೆ ಚುನಾವಣೆ: ಚುನಾವಣಾ ಘೋಷವಾಕ್ಯ ಬಿಡುಗಡೆ ಮಾಡಿದ ಬಿಜೆಪಿ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2021, 21:31 IST
Last Updated 28 ಅಕ್ಟೋಬರ್ 2021, 21:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಂಡೀಗಡ: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ‘ಬಿಜೆಪಿಯೊಂದಿಗೆ ಹೊಸ ಪಂಜಾಬ್‌’ ಎಂಬ ಚುನಾವಣಾ ಘೋಷ ವಾಕ್ಯವನ್ನು ಬಿಜೆಪಿ ಗುರುವಾರ ಬಿಡುಗಡೆ ಮಾಡಿದೆ.

ಪಕ್ಷವು ರಾಜ್ಯದ ಎಲ್ಲಾ 117 ವಿಧಾನಸಭಾ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಲಿದೆ. ಸಮಾಜದ ಪ್ರತಿಯೊಂದು ವರ್ಗಕ್ಕೂ ಮನ್ನಣೆ ನೀಡಲಾಗುತ್ತದೆ ಎಂದು ಬಿಜೆಪಿ ಹೇಳಿದೆ.

ಚಂಡೀಗಡದಲ್ಲಿ ನಡೆದ ಬಿಜೆಪಿಯ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯ ನಂತರ ಎಸ್‌ಎಡಿ ಮೈತ್ರಿಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಅವರು ಪಕ್ಷದ ಹೊಸ ಘೋಷವಾಕ್ಯದ ಬಗ್ಗೆ ಮಾತನಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.