ADVERTISEMENT

ಗೋಪ್ಯ ಮಾಹಿತಿ ಸೋರಿಕೆ: ನೌಕಾಪಡೆ ಕಮಾಂಡರ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌

ಪಿಟಿಐ
Published 24 ನವೆಂಬರ್ 2021, 6:07 IST
Last Updated 24 ನವೆಂಬರ್ 2021, 6:07 IST
ಸಿಬಿಐ
ಸಿಬಿಐ   

ನವದೆಹಲಿ: ನೌಕಾಪಡೆಯ ಗೋಪ್ಯ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕಮಾಂಡರ್ ಜಗದೀಶ್‌ ಎಂಬುವವರ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿದೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ನೌಕಾಪಡೆಯ ಸ್ವತ್ತುಗಳ ನಿರ್ವಹಣೆ ಹಾಗೂ ಕೆಲ ಸಾಮಗ್ರಿಗಳ ಖರೀದಿಗೆ ಸಂಬಂಧಿಸಿದ ಗೋಪ್ಯ ಮಾಹಿತಿ ಸೋರಿಕೆ ಮಾಡಿದ ಆರೋಪದಡಿ ಕಮಾಂಡರ್‌ ಜಗದೀಶ್‌ ಅವರನ್ನು ಸಿಬಿಐ ಅಧಿಕಾರಿಗಳು ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು. ಪ್ರಕರಣದಲ್ಲಿ ಆರೋಪಿಗಳಾಗಿರುವ ನಿವೃತ್ತ ಅಧಿಕಾರಿಗಳು ಸೇರಿ ಆರು ಜನರ ವಿರುದ್ಧ ಈಗಾಗಲೇ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ. ಜಗದೀಶ್‌ ವಿರುದ್ಧ ತನಿಖೆ ನಡೆಯುತ್ತಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ದೇಶದ 19 ಸ್ಥಳಗಳಲ್ಲಿ ಸೆಪ್ಟೆಂಬರ್‌ 2ರಂದು ಶೋಧ ಕಾರ್ಯ ಕೈಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.