ಭುವನೇಶ್ವರ: ನಿರ್ಜಲೀಕರಣ ಸಮಸ್ಯೆಯಿಂದ ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಪಟ್ನಾಯಕ್ ಅವರನ್ನು ಭಾನುವಾರ ಸಂಜೆ 5.15ಕ್ಕೆ ಭುವನೇಶ್ವರದ ಎಸ್‌ಯುಎಂ ಅಲ್ಟಿಮೇಟ್ ಮೆಡಿಕೇರ್‌ಗೆ ದಾಖಲಿಸಲಾಯಿತು. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ’ ಎಂದು ಆಸ್ಪತ್ರೆ ಹೊರಡಿಸಿದ ಪ್ರಕಟಣೆ ತಿಳಿಸಿದೆ.
ಪಟ್ನಾಯಕ್ ಅವರು ಶನಿವಾರ ರಾತ್ರಿ ಅಸ್ವಸ್ಥಗೊಂಡಿದ್ದರು. ಕೆಲವು ವೈದ್ಯರು ಅವರ ನಿವಾಸಕ್ಕೆ ತೆರಳಿ ಚಿಕಿತ್ಸೆ ನೀಡಿದ್ದರು ಎಂದು ಪಕ್ಷದ ನಾಯಕ ನವೀನ್ ನಿವಾಸ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.