ಭುವನೇಶ್ವರ: ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿದ್ದ ಬಿಜೆಡಿ ಮುಖ್ಯಸ್ಥ ಹಾಗೂ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಅವರನ್ನು ಭುವನೇಶ್ವರದ ಎಸ್‌ಯುಎಂ ಅಲ್ಟಿಮೇಟ್ ಮೆಡಿಕೇರ್‌ಗೆ ಭಾನುವಾರ ದಾಖಲಿಸಲಾಗಿತ್ತು.
78 ವರ್ಷದ ಪಟ್ನಾಯಕ್ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ. ಇಂದು ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾತನಾಡಿರುವ ಬಿಜೆಡಿ ಉಪಾಧ್ಯಕ್ಷ ಸಂಜಯ್ ದಾಸ್ ಬರ್ಮಾ, ಪಟ್ನಾಯಕ್ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ನಿರ್ಜಲೀಕರಣ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಒಡಿಶಾ ರಾಜ್ಯಪಾಲ ಹರಿ ಬಾಬು ಕಂಭಂಪತಿ, ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪಟ್ನಾಯಕ್ ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.