ADVERTISEMENT

ನವಿ ಮುಂಬೈ: ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಪಿಟಿಐ
Published 8 ಅಕ್ಟೋಬರ್ 2025, 13:27 IST
Last Updated 8 ಅಕ್ಟೋಬರ್ 2025, 13:27 IST
<div class="paragraphs"><p>ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ</p></div>

ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ

   

ಮುಂಬೈ: ₹19,650 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು.

1,160 ಹೆಕ್ಟೇರ್‌ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಹೊಸ ವಿಮಾನ ನಿಲ್ದಾಣ ದೇಶದ ವಾಯುಯಾನ ಸಾಮರ್ಥ್ಯವನ್ನು ಹೆಚ್ಚಿಸುವ ಜೊತೆಗೆ, ಮುಂಬೈನ ಹಾಲಿ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡವನ್ನು ಕಡಿಮೆ ಮಾಡಲಿದೆ.

ADVERTISEMENT

ಉದ್ಘಾಟನೆಗೂ ಮುನ್ನ ಪ್ರಧಾನಮಂತ್ರಿಯವರು ವಿಮಾನ ನಿಲ್ದಾಣದಲ್ಲಿ ಕಲ್ಪಿಸಿರುವ ಅತ್ಯಾಧುನಿಕ ಸೌಲಭ್ಯ ವೀಕ್ಷಿಸಿದರು.

ಇದು ದೇಶದ ಅತಿದೊಡ್ಡ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣವಾಗಿದ್ದು, ಸಾರ್ವಜನಿಕ, ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಮುಂಬೈನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿದೆ.

ಇದೇ ವೇಳೆ ಅವರು ಮುಂಬೈ ನಗರ ಸಾರಿಗೆಯಲ್ಲಿ ಮಹತ್ವದ ಮೈಲುಗಲ್ಲಾಗಲಿರುವ ಮುಂಬೈ ಮೆಟ್ರೊ ರೈಲಿನ ಮೂರನೇ ಹಂತವನ್ನು ಉದ್ಘಾಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.