ADVERTISEMENT

ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಸಿದ್ಧ

ಪಿಟಿಐ
Published 30 ಸೆಪ್ಟೆಂಬರ್ 2025, 13:31 IST
Last Updated 30 ಸೆಪ್ಟೆಂಬರ್ 2025, 13:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಎನ್‌ಎಂಐಎ) ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿಲ್ದಾಣದ ಏರೋಡ್ರೋಮ್ ಪರವಾನಗಿ ನೀಡಿದೆ.

ರಾಯಗಡ ಜಿಲ್ಲೆಯ ಉಲ್ವೆಯಲ್ಲಿರುವ ವಿಮಾನ ನಿಲ್ದಾಣವು ಮುಂಬೈ ಮೆಟ್ರೊಪಾಲಿಟನ್ ಪ್ರದೇಶದ (ಎನ್‌ಎಂಆರ್) ಎರಡನೇ ವಿಮಾನ ನಿಲ್ದಾಣವಾಗಿದೆ. ಮುಂಬೈನಲ್ಲಿ ಈಗಾಗಲೇ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಿದೆ.

‘ಕಟ್ಟುನಿಟ್ಟಾದ ಸುರಕ್ಷತೆ ಮತ್ತು ನಿಯಂತ್ರಕ ಅವಶ್ಯಕತೆಗಳನ್ನು ಪೂರೈಸಿದ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಏರೋಡ್ರೋಮ್ ಪರವಾನಗಿ ನೀಡಲಾಗುತ್ತದೆ. ಇದು ಎನ್‌ಎಂಐಎ ಸಂಪೂರ್ಣವಾಗಿ ಕಾರ್ಯನಿರ್ವಹಿಸುವತ್ತ ಸಾಗುವ ಪ್ರ‌ಗತಿಯ ಪ್ರಮುಖ ಹೆಜ್ಜೆಯಾಗಿದೆ’ ಎಂದು ಎನ್‌ಎಂಐಎ ವಕ್ತಾರರು ಮಂಗಳವಾರ ಹೇಳಿದ್ದಾರೆ.

ADVERTISEMENT

‘ಏರೋಡ್ರೋ‌ಮ್ ಪರವಾನಗಿ ಜಾರಿಯಲ್ಲಿರುವುದರಿಂದ, ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಸಂಪರ್ಕವನ್ನು ಹೆಚ್ಚಿಸುವ ಮತ್ತು ನವಿ ಮುಂಬೈಯನ್ನು ಪ್ರಪಂಚದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಆಧುನಿಕ ಗೇಟ್‌ವೇ ಸ್ಥಾಪನೆಯ ತನ್ನ ಗುರಿಯತ್ತ ಎನ್‌ಎಂಐಎ ಸಾಗುತ್ತಿದೆ’ ಎಂದು ಅವರು ತಿಳಿಸಿದ್ದಾರೆ. 

ಏರ್‌ ಇಂಡಿಯಾ, ಇಂಡಿಗೊ ಮತ್ತು ಆಕಾಶ ಏರ್‌ ಈಗಾಗಲೇ ಹೊಸ ವಿಮಾನ ನಿಲ್ದಾಣದಿಂದ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಯೋಜನೆಯನ್ನು ಘೋಷಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.